ಉಪರಾಷ್ಟ್ರಪತಿ ಚುನಾವಣಾ ಕಣಕ್ಕೆ ನಾಮಪತ್ರ ಸಲ್ಲಿಸಿದ ಜಿಲ್ಲೆಯ ಸೊಸೆ| ರಾಜಕೀಯದಲ್ಲಿ ಸೋಲು – ಗೆಲುವು ಮುಖ್ಯವಲ್ಲ
ನಾನು ಎದುರಾಳಿಗಳ ನಡೆಗೆ ಹೆದರುವುದಿಲ್ಲ ಎಂದ ಮಹಿಳಾ ನಾಯಕಿ
ಅಂಕೋಲಾ: ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಉತ್ತರ ಕನ್ನಡ ಜಿಲ್ಲೆಯ ಸೊಸೆಯೇಂದೇ ಕರೆಯಿಸಿಕೊಳ್ಳುವ, ರಾಷ್ಟ್ರೀಯ – ಅಂತರಾಷ್ಟ್ರೀಯ ಮಟ್ಟದಲ್ಲೂ ವರ್ಚಸ್ವೀ ಮಹಿಳೆಯಾಗಿ ಗುರುತಿಸಿಕೊಂಡ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.
ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಿನ ಉಪ ರಾಷ್ಟ್ರಪತಿಗಳ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.ಮಾರ್ಗರೇಟ್ ಆಳ್ವಾ ಅವರು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ವೇಳೆ, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಎನ್‌ಸಿಪಿಯ ಶರದ್ ಪವಾರ್, ಸಿಪಿಐ-ಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ ರಾಜಾ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಾರ್ಗರೇಟ್ ಆಳ್ವಾ , ತನ್ನನ್ನು ಅಭ್ಯರ್ಥಿ ಸ್ಥಾನಕ್ಕೆ ಆಯ್ಕೆ ಮಾಡಿದ ಯುಪಿಎ ದ ಎಲ್ಲಾ ಅಂಗ ಪಕ್ಷಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿ. ರಾಜಕೀಯದಲ್ಲಿ ಸೋಲು – ಗೆಲುವು ಮುಖ್ಯವಲ್ಲ : ಅದನ್ನು ನಾವು ಹೇಗೆ ಎದುರಿಸುತ್ತೇವೆ ಎನ್ನುವುದನ್ನು ಆಧರಿಸಿರುತ್ತದೆ. ನಾನು ನಮ್ಮ ಎದುರಾಳಿಗಳ ನಡೆಗೆ ಹಾಗೆಲ್ಲಾ ಹೆದರುವುವಳು, ಬಗ್ಗುವವಳಲ್ಲ ಎಂದು ಘಟ್ಟಿ ಧ್ವನಿಯಲ್ಲಿ ಹೇಳಿದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ