ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಟ್ವಿಟರ್ ಅಭಿಯಾನಕ್ಕೆ ಜಿಲ್ಲೆಯ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದಲ್ಲಿ 35 ಟಾಪ್ ಹ್ಯಾಷ್ ಟ್ಯಾಗ್ ನಡಿ #NoHospitalNoVote ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.
ಹಲವಾರು ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದೆ. ಉತ್ತರಕನ್ನಡದ ಜನತೆ ತುರ್ತು ಅಥವಾ ಯಾವುದೇ ಚಿಕಿತ್ಸೆಗಾಗಿ ಉಡುಪಿ, ಮಂಗಳೂರನ್ನೇ ಅವಲಂಬಿಸುವಂತಾಗಿದೆ.
ಹೀಗೆ ಸೋಶಿಯಲ್ ಮೀಡಿಯಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೂಗು ಟ್ರೆಂಡ್ ಆಗುತ್ತಲೇ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಹೃದಯ ಭಾಗವಾದ ಕುಮಟಾದ ಆಸುಪಾಸಿನಲ್ಲೇ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದೇವೆ. ನಿಮ್ಮ ಸಹಕಾರ ಇರಲಿ ಎಂದು ಹೇಳಿದ್ದಾರೆ.
ಇದೇ ವೇಳೆ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೂಗಿಗೆ ಬೆಂಬಲ ನೀಡಿದ್ದು, ಉತ್ತರಕನ್ನಡ ಕನ್ನಡ ಜನತೆಯ ಹೋರಾಟಕ್ಕೆ ನನ್ನ ಬೆಂಬಲವಿದೆ.ಕೇoದ್ರ ಮತ್ತು ರಾಜ್ಯ ಸರ್ಕಾರಗಳು ಜನರನ್ನು ಬೇಡಿಕೆಯನ್ನು ಆಲಿಸಿ, ಈಡೇರಿಬೇಕು ಎಂದು ಆಗ್ರಹಿಸಿದ್ದಾರೆ.
ಯಾವುದೇ ಅಪಘಾತವಾದರೆ ಜಿಲ್ಲೆಯ ಜನ ಈಗ ಹೆಚ್ಚಿನ ಚಿಕಿತ್ಸೆಗಾಗಿ ಅಥವಾ ತುರ್ತು ಚಿಕಿತ್ಸೆಗಾಗಿ ಹೊರ ಜಿಲ್ಲೆಗಳನ್ನೇ ಅಲಂಬಿಸಬೇಕಿದೆ. ಹೀಗಾಗಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಕೂಗು ಜೋರಾಗಿದೆ.
ವಿಸ್ಮಯ ನ್ಯೂಸ್ ಕುಮಟಾ