Important
Trending

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಐವರು

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸಿದ್ದಾಪುರ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. ಹೊಸಳ್ಳಿಯಿಂದ ಶಿರಸಿ ಕಡೆ ತೆರಳುತ್ತಿದ್ದ ಝೆನ್ ಕಾರಿನ ಎಂಜಿನ್ ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: ವಿದ್ಯುತ್ ಟ್ರಾನ್ಸ್ ಫರ್ಮರ್ ಗೆ ಡಿಕ್ಕಿ ಸುಟ್ಟುಕರಕಲಾದ ಕಾರು

ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು , ಕಾರಿನಲ್ಲಿದ್ದವರು ಎಚ್ಚೆತ್ತುಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರು ಚಿಕ್ಕ ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಜರಾಗಿ ಬೆಂಕಿ ನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Leave a Reply

Your email address will not be published. Required fields are marked *

Back to top button