ಹೊನ್ನಾವರ: ಗೃಹಿಣಿಯೊಬ್ಬಳು ಮಗುವಿನ ಸಮೇತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾವರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಜಲವಳ್ಳಿ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಲಲಿತ ನಾಯ್ಕ 28, ಮಾನಸ(2) ಸಾವಿಗೆ ಶರಣಾದವರು. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ