ಕುಮಟಾ: ಪಟ್ಟಣದ ಹೊಸ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಸಮೀಪ ಅಂಗಡಿ, ಹೋಟೆಲ್‌ಗಳ ಮೇಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪುರಸಭೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ಸುಮಾರು 40 ಕೆ.ಜಿಯಷ್ಟು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದಿದೆ.
ಈ ವೇಳೆ ಅಂಗಡಿಕಾರರಿಗೆ ಮತ್ತೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಸಲಾಗಿದೆ. ಇದೇ ವೇಳೆ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಫುಡ್ ಸ್ಟಾಲ್‌ಗಳ ಮೇಲೂ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಕುಮಟಾ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ವೀಣಾ ಎಂ., ಸಿಬ್ಬಂದಿಯಾದ ಹರ್ಷ ಗಾಂವಕರ, ಸುಧೀರ ಗೌಡ, ನಮೃತಾ ನಾಯ್ಕ, ಇದ್ದರು.
ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ, ಕುಮಟಾ