Important
Trending

ನಿರ್ಜನ ಪ್ರದೇಶದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಶಿರಸಿ: ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನ ನಗರದ ಆನೆಹೊಂಡ ಹತ್ತಿರದ ಅರಣ್ಯ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನ ನವೀನ್ ಹಾಗೂ ನಿಖಿಲ್ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಸುಮಾರು 25 ಸಾವಿರ ಮೌಲ್ಯದ 1 ಕೆ.ಜಿ 54 ಗ್ರಾಂ ತೂಕದ ಗಾಂಜಾ ಹಾಗೂ ನಗದನ್ನ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭಿಸಿದೆ.

ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಸ್ಥಳ ಪರಿಶೀಲನೆ | ಕುಮಟಾ ತಾಲೂಕಿನ ನಾಲ್ಕು ಕಡೆಗಳಲ್ಲಿ ಜಿಲ್ಲಾಧಿಕಾರಿಗಳ ಸುತ್ತಾಟ: ಯಾವುದು ಬಹುತೇಕ ಅಂತಿಮವಾಗಿದೆ ನೋಡಿ?

ಖಚಿತ ಮಾಹಿತಿ ಮತ್ತು ದೂರಿನ ಹಿನ್ನಲೆಯಲ್ಲಿ ಪೊಲೀಸರು ಗಾಂಜಾ ಮಾರಾಟ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಇದೀಗ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿರಸಿ ಸಿಪಿಐ ರಾಮಚಂದ್ರ ನಾಯಕ ನೇತೃತ್ವದಲ್ಲಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Back to top button