Important
Trending

ಚಲಿಸುತ್ತಿದ್ದ ಲಾರಿಗೆ ಬೆಂಕಿ: ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡ ಚಾಲಕ

ಯಲ್ಲಾಪುರ: ಚಲಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಗುಳ್ಳಾಪುರ ಬಳಿಯ ಮೊಗದ್ದೆ ಸಮೀಪ ನಡೆದಿದೆ. ಟೈಯರಿನ ಘರ್ಷಣೆಯಿಂದಾಗಿ ಕೊಪ್ಪಳದಿಂದ ಅಂಕೋಲಾ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಚಾಲಕ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ನಿರ್ಜನ ಪ್ರದೇಶದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಾರಿಯಲ್ಲಿದ್ದ ಸಿಮೆಂಟ್ ಸಿಮೆಂಟ್ ಕುಡಾ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ, ಈ ವೇಳೆಗೆ ಆಗಲೇ ಲಾರಿ ಸುಟ್ಟು ಭಸ್ಮವಾಗಿದೆ.

ನಿಯಂತ್ರಣ ತಪ್ಪಿ ಬಿದ್ದ ಬೈಕ್: ಕಾಲೇಜಿನ ಉಪನ್ಯಾಸಕ ನಿಧನ

ವಿಸ್ಮಯ ನ್ಯೂಸ್, ಕಾರವಾರ

Back to top button