Follow Us On

WhatsApp Group
Important
Trending

ಐ.ಎಸ್.ಐ ನಂಟು ಹೊಂದಿರುವ ಶಂಕೆ: ಭಟ್ಕಳ ಮೂಲದ ಓರ್ವ ವ್ಯಕ್ತಿ ವಶಕ್ಕೆ

ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ತಂಡದ ಕಾರ್ಯಾಚರಣೆ

ಭಟ್ಕಳ: ಐ.ಎಸ್.ಐ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್.ಐ.ಎ ತಂಡದಿoದ ಭಟ್ಕಳ ಮೂಲದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ರಾಷ್ಟ್ರೀಯ ತನಿಖಾ ತಂಡ ಭಟ್ಕಳಕ್ಕೆ ಭೇಟಿ ನೀಡಿ ವ್ಯಕ್ತಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ ಜಲಪಾತದಲ್ಲಿ ಬಿದ್ದು ಸಾವು

ಈತ ಐ.ಎಸ್.ಐ.ಎಸ್ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತನನ್ನು ಗುಪ್ತ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button