ಶಿರಸಿ: 91ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿ ನಡೆಸಿದ ಶಿರಸಿ ತಾಲೂಕಿನ ತಾರಗೋಡ ಗ್ರಾಮದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರನ್ನು ಮುಕ್ತಕಂಠದಿoದ ಶ್ಲಾಘಿಸಿದ್ದಾರೆ. ಭಾನುವಾರದ ಮನ್ ಕೀ ಬಾತ್ ನಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊoಡಿರುವ ಅವರು, ಕರ್ನಾಟಕದಲ್ಲಿ ಮಧುಕೇಶ್ವರ ಎಂಬುವವರು ಸರಕಾರದ ಸಬ್ಸಿಡಿಯನ್ನು ಬಳಸಿಕೊಂಡು ಉತ್ತಮವಾಗಿ ಜೇನುಕೃಷಿಯನ್ನು ಮಾಡಿದ್ದು, ಮಾದರಿಯಾಗಿದ್ದಾರೆ ಎಂದಿದ್ದಾರೆ.
ಐ.ಎಸ್.ಐ ನಂಟು ಹೊಂದಿರುವ ಶಂಕೆ: ಭಟ್ಕಳ ಮೂಲದ ಓರ್ವ ವ್ಯಕ್ತಿ ವಶಕ್ಕೆ
ಹೌದು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸದಾಶಿವಳ್ಳಿ ಗ್ರಾಮದ ತಾರಗೋಡಿನ ಜೇನು ಕೃಷಿಕರಾದ ಮಧುಕೇಶ್ವರ ಹೆಗಡೆಯ ಜೇನುಕೃಷಿ ಕುರಿತಾಗಿ ಪ್ರಧಾನಿ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರದ ಸಹಾಯಧನ ಸೌಲಭ್ಯ ಪಡೆದಿದ್ದ ಮಧುಕೇಶ್ವರ ಹೆಗಡೆ ಅವರು ಇಂದು ವಾರ್ಷಿಕ ಸರಾಸರಿ 4.5 ಟನ್ ಜೇನುತುಪ್ಪ ಉತ್ಪಾದಿಸುತ್ತಿದ್ದಾರೆ. ಅಲ್ಲದೆ, ವಾರ್ಷಿಕವಾಗಿ ಎರಡು ಕೋಟಿ ರೂಪಾಯಿ ವಹಿವಾಟು ಮಾಡುತ್ತಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ