ಕಾರವಾರ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕೂಗು ಬಲಗೊಳ್ಳುತ್ತಿದ್ದಂತೆ ಆಡಳಿತ ವರ್ಗ,ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದಾರೆ. ಹೌದು,ಕುಮಟಾದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್‌ನೊಟ್ಟಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಯೋಜಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಜಮೀನು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ: ಗಂಭೀರ ಗಾಯ
ಇದೇ ಆಗಸ್ಟ್ 15 ರ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಬಂದು ಅದನ್ನು ಘೋಷಿಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ತ್ರೆಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.
ಮಣಿಪಾಲದ ಕೆಎಂಸಿ ಹಾಗೂ ಮಂಗಳೂರಿನ ದೇರಳಕಟ್ಟೆ ನಿಟ್ಟೆ, ಕ್ಷೇಮಾ ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ. ಒಂದೆರಡು ದಿನದಲ್ಲಿ ಅವರು ಬಂದು ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.
ವಿಸ್ಮಯ ನ್ಯೂಸ್ ಕಾರವಾರ