ಧಾರಾಕಾರ ಮಳೆ: ಮನೆಯ ಮೇಲೆ ಗುಡ್ಡ ಕುಸಿತ: ಮನೆಯಲ್ಲಿ ನಾಲ್ವರು ಸಿಲುಕಿರುವ ಶಂಕೆ

ಸ್ಥಳಕ್ಕೆ ಆಗಮಿಸಿದ ಎನ್‌ಡಿಆರ್‌ಎಫ್ ತಂಡ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಹಲವು ಮನೆಗಳಿಗೆ ನುಗ್ಗಿದ ನೀರು

ಭಟ್ಕಳ: ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ಗ್ರಾಮಗಳು ಮುಳುಗಡೆಯಾಗಿದೆ. ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದ್ದು ತಾಲೂಕಿನ ಬಹುತೇಕ ಮನೆಗಳು ನೀರಿನಿಂದ ಜಲಾವೃತಗೊಂಡಿದೆ.

ಜಮೀನು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ: ಗಂಭೀರ ಗಾಯ

ಮೂಡಭಟ್ಕಳ ಬೈಪಾಸನಿಂದ ಮುಟ್ಟಳ್ಳಿಗೆ ಸಂಪರ್ಕಿಸುವ ರಸ್ತೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದು, ಅಲ್ಲಿನ ನಿವಾಸಿಗಳು ಮನೆಯಲ್ಲಿಸಿಲುಕಿ ಕೊಂಡಿದ್ದಾರೆ. ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಮೂಡಭಟ್ಕಳ ಬೈಪಾಸ್ ಸೇರಿದಂತೆ ಅನೇಕ ಗ್ರಾಮಗಳು ಮುಳುಗಡೆಯಾಗಿದೆ. ಈ ಹಿನ್ನೆಲೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕ ಅನೇಕ ಕಡೆಗಳಲ್ಲಿ ಮನೆಯಲ್ಲಿ ಸುಲಿಕಿಕೊಂಡಿರುವವರನ್ನು ರಕ್ಷಣೆ ಮಾಡುತ್ತಿದ್ದಾರೆ.

ಮಣ್ಕುಳಿಯಿಂದ ಮೂಢ ಭಟ್ಕಳ ಬೈಪಾಸಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿದು ಹೋಗುತ್ತಿರುವ ಹಿನ್ನೆಲೆ ಸಂಪರ್ಕ ಕಡಿತಗೊಂಡಿದೆ. ಭಾರಿ ಮಳೆಯಿಂದ ಭಟ್ಕಳದ ಅನೇಕ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು. ಎನ್.ಡಿ.ಆರ್.ಎಫ್ ತಂಡ ಆಗಮಿಸಿದೆ. ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮನೆಯ ಮೇಲೆ ಗುಡ್ಡಕುಸಿದ ಪರಿಣಾಮ ನಾಲ್ವರು ಮನೆಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯಾಗಿದೆ.


ಹೌದು, ಕೇರಿಪಾಲ್ ನಾರಾಯಣ ಎಂಬ ಮನೆಯ ಮೇಲೆ ಗುಡ್ಡ ಕುಸಿದ ಹಿನ್ನೆಲೆ ಮನೆ ಸಂಪೂರ್ಣ ನೆಲಸಮವಾಗಿದ್ದು ಮನೆಯಲ್ಲಿದ್ದ ನಾಲ್ವರು ಸಿಲಿಕಿಕೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಇದೇ ವೇಳೆ, ತಾಲೂಕಿನಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಆಗಸ್ಟ್ .ರ ಮಂಗಳವಾರ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version