Follow Us On

WhatsApp Group
Important
Trending

ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 11ರ ವರೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ: ಎಚ್ಚರಿಕೆಯಿಂದ ಇರುವಂತೆ ಮಾಹಿತಿ

ಉತ್ತರಕನ್ನಡ: ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 11ರ ವರೆಗೆ ಭಾರೀ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ನೀಡಿದೆ. ಈ ಸಮಯದಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕೆ ನೀಡಿ, ಅಲ್ಲಿನ ಜನ ಹಾಗೂ ಜಾನುವಾರುಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಲ್ಲದೆ, ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ. ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ತಿಳಿಸಲಾಗಿದೆ. ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕಳಗೆ ನಿಲ್ಲದೇ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮಾಹಿತಿ ನೀಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Back to top button