ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಗೇರಸುಸೋಪ್ಪಾ ಸರ್ಕಲ್ ಸಮೀಪ ಸಂಭವಿಸಿದೆ.
ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲೇ ಬಿಡುಬಿಟ್ಟಿದ್ದು, ಮುಂಜಾಗೃತಾ ಕ್ರಮಕೈಗೊಂಡಿದ್ದಾರೆ.
ಪಲ್ಟಿಯಾದ ಟ್ಯಾಂಕರ್‌ನಿoದ ಗ್ಯಾಸ್ ಲೀಕ್ ಆಗುತ್ತಿಲ್ಲ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ತಿಳಿದಬರಬೇಕಿದೆ. ಅಲ್ಲದೆ, ಗ್ಯಾಸ್ ಸೋರಿಕೆ ಕುರಿತು ಪರಿಶೀಲನೆ ನಡೆಸಲು ಮಂಗಳೂರಿoದ ತಂಡವೊoದು ಆಗಮಿಸುತ್ತಿದೆ. ಭಾರೀ ಗಾತ್ರದ ವಾಹನ ಬಿಟ್ಟು ಬಸ್, ಕಾರನ್ನು ದುರ್ಗಾಕೇರಿ ಮಾರ್ಗವಾಗಿ ಬಿಡಲಾಗುತ್ತಿದೆ. ಇನ್ನು ಮಂಗಳೂರು ಕಡೆಯಿoದ ಬರುವ ವಾಹನಕ್ಕೆ ಗೇರಿಸೊಪ್ಪಾ ಮೂಲಕ ಸಾಲ್ಕೋಡು, ಅರೆಅಂಗಡಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ಶರಾವತಿ ನದಿ ತೀರದ ಜನತೆಗೆ ಪ್ರವಾಹದ ಎರಡನೇ ಮುನ್ನೆಚ್ಚರಿಕೆಯ ಸೂಚನೆ ಜಾರಿ: ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.