ಹೊನ್ನಾವರ: ಲಿಂಗನಮಕ್ಕಿಯ ಇಂದಿನ ನೀರಿನ ಮಟ್ಟ 1811.80 ತಲುಪಿದ್ದು 1816 ಕ್ಕೆ ನೀರಿನ ಮಟ್ಟ ತಲುಪಿದ ಕೂಡಲೇ ನೀರು ಹೊರಬಿಡುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ನದಿ ತೀರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
ನದಿಯ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟದ್ದು ಏಕಪ್ರಕಾರವಾಗಿ ಬರುತ್ತಿರುತ್ತದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಇಂದಿನ ಅ೦ದರೆ ದಿನಾಂಕ: 13,08,2022 ರಂದು ಸಂಜೆ 6.00 ಘಂಟೆಗೆ ಜಲಾಶಯದ ನೀರಿನ ಮಟ್ಟವು 1811.80 ಅಡಿಗಳಾಗಿರುತ್ತದೆ.
Job Alert: ಇಲ್ಲಿದೆ ಉದ್ಯೋಗಾವಕಾಶ
ಲಿಂಗನಮಕ್ಕಿ ಜಲಾಶಯದ ಈ ದಿನದ ಒಳ ಹರಿವು ಸುಮಾರು 29,000 ಕ್ಯೂಸೆಕ್ಸ್‌ಗಳಿಗಿ೦ತಲೂ ಅಧಿಕವಾಗಿರುತ್ತದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.
ಆದ್ದರಿಂದ, ಲಿಂಗನಮಕ್ಕಿ ಆಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.
ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಬಿಟ್ಟಲ್ಲಿ ಗೇರುಸೋಪ್ಪಾ ಜಲಾಶಯದಲ್ಲಿ ನೀರನ್ನು ಹಿಡಿಟ್ಟು ಕೊಳ್ಳುವ ಸಾಮರ್ಥ್ಯ ಇಲ್ಲದೆ ಇರುವುದರಿಂದ, ನೀರನ್ನು ಹೋರಬಿಡಲಾಗುವುದು.
ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ
ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ, ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕಂದು ಈ ಮೂಲಕ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ