ಶಿರಸಿ: ತಾಲೂಕು ಮತ್ತು ಸುತ್ತಲಿನ ತಾಲೂಕುಗಳಲ್ಲಿ ಕರೊನಾ ದಿನೇ ದಿನೇ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವನ್ನು ಅನಿರ್ದಿಷ್ಟಾವಧಿಯವರೆಗೆ ಸ್ವಯಂಗೋಷಿತ ಲಾಕ್‍ಡೌನ್ ಮಾಡಲಾಗಿದೆ ಎಂದು ಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ತಿಳಿಸಿದ್ದಾರೆ.
ಅನೇಕ ಮಠ ದೇವಸ್ಥಾನಗಳು ಬಹಳ ಹಿಂದೆಯೇ ತಾವಾಗಿಯೇ ಲಾಕ್‍ಡೌನ್ ನಿಯಮಗಳನ್ನು ಅನುಸರಿಸಿವೆಯಾದರೂ ಶ್ರೀಮಠದಲ್ಲಿ ಹಲವು ನಿಯಮಗಳನ್ನು ಅನುಸರಿಸಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶ್ರೀಮಠದ ಶಿಷ್ಯರಿಂದ ಪಾದಪೂಜೆ, ಭಿಕ್ಷಾ ಸೇವೆಗಳನ್ನು ಹಾಗೂ ಮೊದಲೇ ಪೋನ್ ಮೂಲಕ ಅನುಮತಿ ಪಡೆದು ಬಂದವರಿಗೆ ದಿನಕ್ಕೆ 10 ಜನರ ಮಿತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಸ್ವಯಂಘೋಷಿತವಾಗಿ ಅನಿರ್ದಿಷ್ಠಾವಧಿ ಲಾಕ್‍ಡೌನ್ ನಿಯಮಗಳನ್ನು ಅನುಸರಿಸಲಾಗುವುದು. ಶ್ರೀ ಶ್ರೀಗಳವರ ಅನುಷ್ಠಾನದ ಹೊರತಾಗಿ ಚಾತುರ್ಮಾಸ್ಯದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಕಾರಣ ಸದ್ಭಕ್ತರೆಲ್ಲರೂ ತಮ್ಮ ಮನೆಯಲ್ಲಿಯೇ ಸುರಕ್ಷಿತವಾಗಿದ್ದು ಶ್ರೀ ದೇವರನ್ನು ಭಜಿಸಿ ರೋಗದ ವಿರುದ್ಧ ಜಯಿಸಬೇಕು” ಎಂದು ತಿಳಿಸಿದರು.
ವಿಸ್ಮಯ ನ್ಯೂಸ್ ಶಿರಸಿ
[sliders_pack id=”1487″]