Join Our

WhatsApp Group
Focus News
Trending

ಕೊಂಕಣದ ಸರಸ್ವತಿ ಪಿ.ಯು.ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಅಮೋಘ ಸಾಧನೆ

ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಬಿ.ಕೆ. ಭಂಡಾರಕರ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಪ್ರಜ್ಞಾ ಪ್ರಕಾಶ್ ಶಾನಭಾಗ್ ಇವರು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದಿದ್ದು, ಜೂನ್ 2022ರಲ್ಲಿ ನಡೆದಿರುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ, ತ್ರಿಶಾ ಸಂಸ್ಥೆ ಮಾರ್ಗದರ್ಶನದಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ಅರ್ಹತೆಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ರೋಡ್ ಕ್ರಾಸ್ ಮಾಡುವ ವೇಳೆ ಹಿಂಬದಿಯಿಂದ ಡಿಕ್ಕಿಹೊಡೆದ ಕಾರು: ಬೈಕ್ ಸವಾರ ಸ್ಥಳದಲ್ಲೇ ಸಾವು

ಇವರ ಸಾಧನೆಗೆ ಆಡಳಿತ ಮಂಡಳಿಯವರು ಹಾಗೂ ಪ್ರಾಚಾರ್ಯರಾದ ಶ್ರೀ ಕಿರಣ ಭಟ್ಟರವರು, ವಿಧಾತ್ರಿ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿಯವರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button