ಭಟ್ಕಳದ: ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2021-22 ನೇ ಸಾಲಿನ ವಾರ್ಷಿಕೋತ್ಸವವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಮಟಾದ ಹನುಮಂತ ಬೆಣ್ಣೆ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಸತೀಶ ನಾಯ್ಕ ಮಾತನಾಡಿ “ವಿದ್ಯಾರ್ಥಿಗಳಿಗೆ ಶಿಸ್ತು ಹಾಗೂ ಸಂಯಮ ಅತೀ ಮುಖ್ಯ, ಆಗಲೇ ಯಶಸ್ಸು ಗಳಿಸಲು ಸಾಧ್ಯ’ ಎಂದು ಕಿವಿಮಾತು ಹೇಳಿದರು.
ಮತ್ತೋರ್ವ ಮುಖ್ಯ ಅತಿಥಿ ಖ್ಯಾತ ನಟ, ನಿರೂಪಕ, ಪ್ರಖ್ಯಾತ ಕಂಠದಾನ ಕಲಾವಿದ ಬಡೆಕ್ಕಿಲ ಪ್ರದೀಪ ಮಾತನಾಡಿ ” ಸಾಧನೆಗೆ ಪ್ರೇರಣೆ ಎಲ್ಲಿಂದಲೂ ಬರಬಹುದು, ಅದನ್ನು ಸ್ವೀಕರಿಸಲು ಸದಾ ಸಿದ್ಧರಾಗಿರಬೇಕು. ನಮಗೆ ನಾವೇ ಪ್ರೇರಣೆಯಾಗಬೇಕೆಂದು” ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟ’ನ ಅಧ್ಯಕ್ಷ ಡಾ. ಸುರೇಶ ನಾಯಕ್ “ವಿದ್ಯಾರ್ಥಿಗಳು ಪದವಿಯ ಮೂರು ವರ್ಷವನ್ನು ಸೂಕ್ತವಾಗಿ ಉಪಯೋಗಿಸಿ, ಕೌಶಲ್ಯವನ್ನು ವೃದ್ಧಿಸಿ ಉದ್ಯೋಗವಂತರಾಗಬೇಕು” ಎಂದು ಹೇಳಿದರು. 2021-22 ನೇ ಸಾಲಿನ ವಿವಿಧ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪಠ್ಯ ಪಠ್ಯೇತರ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಪ್ರಾಂಶುಪಾಲರಾದ ಶ್ರೀನಾಥ ಪೈ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳನ್ನು ಬಿ.ಬಿ.ಎ-ಬಿ.ಎ ವಿಭಾಗದ ಉಪಪ್ರಾಂಶುಪಾಲ ವಿಶ್ವನಾಥ ಭಟ್ಟ ಹಾಗೂ ಬಿ.ಸಿ.ಎ ವಿಭಾಗದ ಉಪಪ್ರಾಂಶುಪಾಲ ವಿಖ್ಯಾತ ಪ್ರಭು ಪರಿಚಯಿಸಿದರೆ. ಬಿ.ಕಾಂ ವಿಭಾಗದ ಉಪಪ್ರಾಂಶುಪಾಲ ಪಿ.ಎಸ್. ಹೆಬ್ಬಾರ್ ಸ್ವಾಗತಿಸಿದರೆ, ಉಪನ್ಯಾಸಕರಾದ ಸುಬ್ರಮ್ಹಣ್ಯ ನಾಯ್ಕ ವಂದಿಸಿದರು. ಉಪನ್ಯಾಸಕರಾದ ದೀಪಾ ನಾಯ್ಕ ಹಾಗೂ ನಮ್ರತಾ ಪೈ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.
ವಿಸ್ಮಯ ನ್ಯೂಸ್, ಭಟ್ಕಳ