Follow Us On

WhatsApp Group
Important
Trending

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾಗವಾನಿ, ನಂದಿ ಕಟ್ಟಿಗೆ ವಶಕ್ಕೆ: ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ದಾಳಿ

ಹೊನ್ನಾವರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾಗವಾನಿ,ನಂದಿ ಕಟ್ಟಿಗೆಗಳನ್ನು ಖಚಿತ ಮಾಹಿತಿ ಮೇರೆಗೆ ಹೊನ್ನಾವರದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಗೇರುಸೊಪ್ಪಾ ಅರಣ್ಯ ವಲಯ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ತುಂಬೊಳ್ಳಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಸೊಳ್ಳೆ ನಿವಾರಣೆಗೆ ಬಳಸುವ ಗುಡ್ ನೈಟ್ ಲಿಕ್ವಿಡ್ ಕುಡಿದು ಬಾಲಕ ಸಾವು

ಸುರೇಶ್ ನಾಯ್ಕ‌ ಎನ್ನುವವರು ಇದನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು ಎನ್ನಲಾಗಿದೆ. ಇವರು ಗ್ರಾಮ ಪಂಚಾಯತ ಸದಸ್ಯ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಭಂದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಸುದ್ದಿಯನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು ಮೆಡಿಕಲ್ ಶಾಪ್ ನಲ್ಲಿ ಬುರ್ಕಾಧಾರಿ ಮಹಿಳೆಯರ ಕಳ್ಳತನ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ನೋಡಿ

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ

Back to top button