ಹೊನ್ನಾವರ:’ಸೇವಾ ಮನೋಭಾವದೊಂದಿಗೆ ತಮ್ಮ ವೃತ್ತಿಯನ್ನು ನಿರ್ವಹಿಸಿದ ವ್ಯಕ್ತಿಯ ಬದುಕು ನೆಮ್ಮದಿಯಿಂದ ಕೂಡಿರುತ್ತದೆ’ ಎಂದು ಎಸ್.ಡಿ.ಎಂ.ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ಪಿ.ಎಂ.ಹೊನ್ನಾವರ ಅಭಿಪ್ರಾಯಪಟ್ಟರು. ಕಾಲೇಜಿನ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಗೋಳಶಾಸ್ತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ.ಜಿ.ಎಸ್.ಭಟ್ಟ ವಂದೂರು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಕಾರಿನಲ್ಲಿ ಬಂದು ಬಾಲಕನನ್ನು ಅಪರಿಸಿದ ದುಷ್ಕರ್ಮಿಗಳು: ಅಂಗಡಿಯಿoದ ಮನೆಗೆ ಬರುತ್ತಿದ್ದಾಗ ರಸ್ತೆಯಲ್ಲೇ ಅಪಹರಣ
ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಎಂ.ಜಿ.ಹೆಗಡೆ ಮಾತನಾಡಿ,ವೃತ್ತಿ ಜೀವನದಲ್ಲಿ ಏರಿಳಿತಗಳು ಸಾಮಾನ್ಯ.ವಿಷಮ ಸ್ಥಿತಿಯನ್ನೂ ಧೈರ್ಯದಿಂದ ಎದುರಿಸಬೇಕು.ವಿನಯಶೀಲತೆಯನ್ನು ಮೈಗೂಡಿಸಿಕೊಂಡಿರುವ ಪ್ರೊ.ಜಿ.ಎಸ್.ಭಟ್ಟ ಸಮಚಿತ್ತದಿಂದ ತಮ್ಮ ವೃತ್ತಿಬದುಕಿನ ಸವಾಲುಗಳನ್ನು ಎದುರಿಸಿದರು’ ಎಂದು ಹೇಳಿದರು.
ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮಾತನಾಡಿ ನಿವೃತ್ತರಿಗೆ ಶುಭ ಹಾರೈಸಿದರು. ಪ್ರೊ.ಜಿ.ಎಸ್.ಭಟ್ಟ ಮಾತನಾಡಿ ತಮ್ಮ ವೃತ್ತಿ ಬದುಕಿನಲ್ಲಿ ಸಹಕರಿಸಿದ ಎಲ್ಲರಿಗೆ ಕೃತಜ್ಞತೆ ಹೇಳಿದರು. ಶಿಕ್ಷಕರ ಸಂಘದ ಕಾರ್ಯದರ್ಶಿ ಡಾ.ಮಹೇಶ ಭಟ್ಟ ಸ್ವಾಗತಿಸಿದರು.ಉಪನ್ಯಾಸಕ ಪ್ರಶಾಂತ ಹೆಗಡೆ ಮೂಡಲಮನೆ ವಂದಿಸಿದರು.
ವಿಸ್ಮಯ ನ್ಯೂಸ್, ಹೊನ್ನಾವರ