Important
Trending

KSRTC ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ

ಯಲ್ಲಾಪುರ: ಸಾರಿಗೆ ಸಂಸ್ಥೆಯ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದಲ್ಲಿ ಹೋಟೆಲ್ ಬಳಿ ನಡೆದಿದೆ.ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ
ಬಸ್, ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ

ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಹೇಳಿದ್ದೇನು?

ಮೃತಪಟ್ಟ ಬೈಕ್ ಸವಾರನನ್ನು ಬಾಗಲಕೋಟೆಯ ಶಿವರಾಜ ಹುನಗುಂದ (23) ಎಂದು ಗುರುತಿಸಲಾಗಿದೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅಪಘಾತದಿಂದಾಗಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಯಲ್ಲಾಪುರ

Related Articles

Back to top button