ಪ್ರಯಾಣಿಕರ ಟೊಂಪೋ ಮತ್ತು ಕಾರಿನ ನಡುವೆ ಡಿಕ್ಕಿ: 14 ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಟೊಂಪೋಗೆ ಡಿಕ್ಕಿ ಹೊಡೆದ ಕಾರು

ಕುಮಟಾ: ಪ್ರಯಾಣಿಕರ ಟೆಂಪೊ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, 14 ಪ್ರಯಾಣಿಕರು ಗಾಯಗೊಂಡ ಘಟನೆ ಇಲ್ಲಿನ ಹೊನ್ಮಾವ್ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳೂರಿನಿಂದ ಕುಮಟಾ ಕಡೆ ಬರುತ್ತಿದ್ದ ಕಾರಿನ ನಿಯಂತ್ರಣ ತಪ್ಪಿ, ಪ್ರಯಾಣಿಕರನ್ನು ತುಂಬಿಕೊಂಡು ಹೊನ್ನಾವರ ಕಡೆಗೆ ತೆರಳುತ್ತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ.

KSRTC ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಪ್ರಥಮ ಚಿಕಿತ್ಸೆ ನೀಡಿಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಟೆಂಪೊದಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version