Big NewsImportant
Trending

ಸಾರ್ವಜನಿಕ ಗಣೇಶೋತ್ಸವದ ಆಚರಣೆಗೆ ಭರದ ಸಿದ್ಧತೆ: ಸರ್ಕಾರದ ಮಾರ್ಗಸೂಚಿ ಹೇಗೆ ನೋಡಿ? ಮಹತ್ವದ ಮಾಹಿತಿ ಇಲ್ಲಿದೆ.

ಏನೆಲ್ಲಾ ನಿಯಮಗಳಿವೆ? ಮುನ್ನೆಚ್ಚರಿಕಾ ಕ್ರಮಗಳೇನು?

ಕಾರವಾರ: ಕೋವಿಡ್ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಗಣೇಶ ಚತುರ್ಥಿಗೆ ಈ ಬಾರೀ ಭರದ ಸಿದ್ಧತೆ ನಡೆದಿದೆ. ಮನೆ-ಮನಗಳಲ್ಲಿ ಹಬ್ಬದ ಸಡಗರ ಜೋರಾಗಿದ್ದು, ಈ ಬಾರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಮೂರ್ತಿ ಪ್ರತಿಷ್ಠಾಪನೆಗೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಸುತ್ತೋಲೆ ಹೊರಡಿಸಿದೆ.

ಜಿಂಕೆ ಸಾಯಿಸಿ ಊಟ ತಯಾರಿಸುತ್ತಿದ್ದಾಗಲೇ ಬೇಟೆಗಾರನ ಬಂಧನ| ತಲೆಮರೆಸಿ ಕೊಂಡ ಇನ್ನೋರ್ವ ಆರೋಪಿತನ ಪತ್ತೆಗೆ ಬಲೆ ಬೀಸಿದ ಇಲಾಖೆ

ಹೌದು, ಗಣೇಶ ಹಬ್ಬದಲ್ಲಿ ಸಾರ್ವಜನಿಕ ಗಣೇಶೋತ್ಸವದ ಆಚರಣೆಗೆ ಪರವಾನಿಗೆಯನ್ನು ಎಲ್ಲಾ ಇಲಾಖೆಗಳ ಸಮನ್ವಯದಿಂದ ನೀಡುವಂತೆ ಮತ್ತು ಏಕ ಗವಾಕ್ಷಿ ಯೋಜನೆಯಲ್ಲಿ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಹಾಗದಾದರೆ, ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಏನೆಲ್ಲಾ ಅಂಶಗಳಿವೆ. ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು, ಆಯೋಜಕರು, ಯಾವೆಲ್ಲಾ ನಿಯಮಗಳನ್ನು ಪಾಲಿಸಬೇಕು. ಈ ಕುರಿತ ವಿವರ ಇಲ್ಲಿದೆ ನೋಡಿ.

ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ಸೂಕ್ತವಾಗಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದವುಗಳ ಪರವಾನಿಗೆಯನ್ನು ಕಂದಾಯ, ಲೋಕೋಪಯೋಗಿ ಇಲಾಖೆ ಅಗ್ನಿಶಾಮಕದಳ ಹಾಗೂ ಪೋಲೀಸ್ ಇಲಾಖೆಗಳಿಂದ ಸಂಯೋಜಿತವಾಗಿ ಅಗತ್ಯವಿರುವ ಏಕ ಗವಾಕ್ಷಿ ಅಡಿಯಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ. ಪರವಾನಿಗೆ ಪತ್ರವನ್ನು ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ಮಾತ್ರ ನ್ಯಾಯಾಲಯದ ನಿರ್ದೇಶನಗಳನ್ನು ಹಾಗೂ ಸಂಬoಧಪಟ್ಟ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯಬೇಕು.

ಯಾವೆಲ್ಲ ನಿಯಮ ಪಾಲಿಸಬೇಕು?

  • ಸಾರ್ವಜನಿಕರ ಸುರಕ್ಷತೆ ಅತ್ಯಗತ್ಯ
  • ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು.
  • ಅಗತ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮರಾ ಅಳಡವಡಿಸಬೇಕು.
  • ವಿಷೇಶವಾಗಿ ಹೈ- ಟೆನ್ಶನ್ ತಂತಿಗಳು ಹಾದು ಹೋಗಿರುವ ಕಡೆಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶಮೂರ್ತಿ ಸ್ಥಾಪಿಸಲು ಅನುಮತಿ ಇಲ್ಲ
  • ಕಾರ್ಯಕ್ರಮದ ಆಯೋಜಕರು ಮುಂಚಿತವಾಗಿ ನಿಗದಿತ ಸಮಯದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು
  • ಎಲ್ಲಾ ಸಂಘ- ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡು ಸಭೆ ನಡೆಸಿ, ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button