Hit and Run Case | ಡಿಕ್ಕಿ ಹೊಡೆದು ಪರಾರಿಯಾದ ಗ್ಯಾಸ್ ಟ್ಯಾಂಕರ್ | ವ್ಯಕ್ತಿ ಸ್ಥಳದಲ್ಲಿಯೇ ಸಾವು
ಲಾರಿ ಚಾಲಕನನ್ನು ಬೆನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಕುಮಟಾ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಸನ್ಮಾನ್ ಹೊಟೇಲ್ ಎದುರಗಡೆ ಸ ಭವಿಸಿದೆ. ಅಪಘಾತ ಆದ ವೇಳೆ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.
ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಅಂಕೋಲಾ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರಸ್ತೆಯಲ್ಲಿಯೇ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದಾನೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿದ್ದು, ಮೃತ ವ್ಯಕ್ತಿಯನ್ನು ಸರ್ಕಾರಿ ತಾಲೂಕಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ತ ಎನ್ನಲಾಗಿದ್ದು, ಈತ ಕಳೆದ ಕೆಲ ತಿಂಗಳಿನಿಂದ ಪಟ್ಟಣ ವ್ಯಾಪ್ತಿಯಲ್ಲಿ ತಿರುಗಾಡುತ್ತಿದ್ದ.
ಈತನ ಗುರುತು ಸಿಕ್ಕಿರೆ ಮಾಹಿತಿ ನೀಡಿ
ಮೃತಪಟ್ಟ ವ್ಯಕ್ತಿ ಈ ಫೋಟೋದಲ್ಲಿರುವ ವ್ಯಕ್ತಿಯಾಗಿದ್ದು, ಯಾರಿಗಾದರೂ ಈ ಕುರಿತು ಮಾಹಿತಿ ಇದ್ದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆ ಅಥವಾ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿ ಕೋರಲಾಗಿದೆ. ಅಪಘಾತ ಪಡಿಸಿದ ಲಾರಿ ಚಾಲಕನನ್ನು ಸಾರ್ವಜನಿಕರು ಬೆನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಸ್ಮಯ ನ್ಯೂಸ್ ಕುಮಟಾ