ಸಾರ್ವಜನಿಕ ಪ್ರಕಟಣೆ: ಈತನ ಕುರಿತು ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಿಕೆ

ಇದೂವರೆಗೂ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ

ಕುಮಟಾ: ಅಪರಿಚಿತ ವ್ಯಕ್ತಿ ಅಪಘಾತದಿಂದಾಗಿ ಮೃತಪಟ್ಟ ಘಟನೆ ಕಳೆದೆರಡು ದಿನಗಳ ಹಿಂದೆ ಕುಮಟಾ ಪಟ್ಟಣದಲ್ಲಿ ನಡೆದಿದ್ದು, ಆದರೆ ಇದುವರೆಗೆ ಮೃತ ವ್ಯಕ್ತಿಯ ಕುರಿತಾಗಿ ಅಥವಾ ಈತನ ಕುಟುಂಬಸ್ಥರ ಕುರಿತಾಗಿ ಯಾವುದೇ ಮಾಹಿತಿ ದೊರೆತಿಲ್ಲವಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಕುಮಟಾ ಪಣ್ಣದಲ್ಲಿ ಭಿಕ್ಷೆಬೇಡಿಕೊಂಡು ದಿನ ಸಾಗಿಸುತ್ತಿದ್ದ ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಒಂದು ಅಪಘಾತ ಪಡಿಸಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಣಕಿ ಮೈದಾನದ ಸಮೀಪದಲ್ಲಿರುವ ಸನ್ಮಾನ್ ಹೊಟೇಲ್ ಎದುರು ನಡೆದಿತ್ತು.

ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆ: ಓರ್ವ ನಾಪತ್ತೆ

ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ ಮೃತ ವ್ಯಕ್ತಿಯ ಕುಟುಂಬಸ್ಥರ ಕುರಿತಾಗಿ ಇದುವರೆಗೆ ಯಾವುದೇ ಮಾಹಿತಿ ದೊರೆತಿಲ್ಲವಾಗಿದೆ. ಆದ ಕಾರಣ ಈ ವ್ಯಕ್ತಿಯ ರಕ್ತ ಸಂಭoದಿಗಳ ಕುರಿತಾಗಿ ಅಥವಾ ಇವರ ಕುರಿತು ಯಾವುದೇ ಮಾಹಿತಿ ಸಿಕ್ಕಲ್ಲಿ ಕೂಡಲೇ ಕುಮಟಾ ಪೊಲೀಸ್ ಠಾಣೆಯ ದೂರವಾಣಿಗೆ ಕರೆ ಮಾಡಿ ಮಾಹಿತಿ ನೀಡಬೆಕೆಂದು ತಿಳಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08386-222333, 9480805272

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Exit mobile version