Focus News
Trending

ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಸಿದ್ಧ ನ್ಯಾಯವಾದಿ ಶಂಕರಮೂರ್ತಿ ಶಾಸ್ತ್ರಿ ನಿಧನ: ಅಭಿಮಾನಿಗಳ, ಹಿತೈಷಿಗಳ ಕಂಬನಿ

ಕುಮಟಾ: ತಾಲೂಕಿನ ಪ್ರಸಿದ್ಧ ನ್ಯಾಯವಾದಿಗಳಲ್ಲಿ ಒಬ್ಬರು ಮತ್ತು ಹವ್ಯಕ ವಿದ್ಯಾವರ್ಧಕ ಸಂಘ ಕುಮಟಾ ಇದರ ಅಧ್ಯಕ್ಷರು ಹಾಗು ಶ್ರೀ ಉಪ್ಪಿನ ಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿದ್ದ ಶ್ರೀ ಶಂಕರಮೂರ್ತಿ ಶಾಸ್ತ್ರಿ ಅವರು ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾವಲುಗಾರನ ಕಟ್ಟಿಹಾಕಿ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ ಯತ್ನ: ಎರಡು ಕಬ್ಬಿಣದ ಕಪಾಟು ಕೊರೆದರ ಕಳ್ಳರು: ಆದರೆ, ಆಗಿದ್ದೇನು?

ತಮ್ಮ ಅನಾರೋಗ್ಯದ ನಡುವೆಯೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲೆಂದು ಸ್ನೇಹಿತರು ಹಾಗೂ ಬಂಧುಗಳು ಪ್ರಾರ್ಥಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button