ಗೋಕರ್ಣದಲ್ಲಿ ಸ್ಯಾಟ್‌ಲೈಟ್ ಫೋನ್ ಸದ್ದು: ಕೆಲವೇ ಮೈಲುಗಳ ದೂರದಲ್ಲಿ ಫೋನ್ ಲೊಕೇಶನ್ ಟ್ರ್ಯಾಕ್

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಆಗಾಗ ಸ್ಯಾಟ್‌ಲೈಟ್ ಸದ್ದು ಮಾಡುತ್ತಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಕೆಲವೆಡೆ ಸ್ಯಾಟಲೈಟ್ ಫೋನ್‌ಗಳು ಆ್ಯಕ್ಟೀವ್ ಆಗಿರುವ ಬಗ್ಗೆ ಮಾಹಿತಿ ಸಿಗುತ್ತಿರುವುದು ಪೊಲೀಸ್ ಇಲಾಖೆಗೆ ತಲೆನೋವು ತಂದಿಟ್ಟಿದೆ. ಹೌದು, ಇದೀಗ ಕುಮಟಾ ತಾಲೂಕಿನ ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಪೋನ್ ಕರೆ ಬಗ್ಗೆ ಮಾಹಿತಿ ಸಿಕ್ಕಿದೆ. ಗೋಕರ್ಣದಿಂದ ಕೆಲವೇ ಮೈಲುಗಳ ದೂರದಲ್ಲಿ ಸ್ಯಾಟಲೈಟ್ ಫೋನ್ ಲೊಕೇಶನ್ ಟ್ರ್ಯಾಕ್ ಆಗಿದ್ದು, ಸಂಪರ್ಕ ಸಾಧಿಸಿದ ಬಗ್ಗೆ ಮಾಹಿತಿ ದೊರೆತಿದೆ. ಕರಾವಳಿ ಕಾವಲು ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

Exit mobile version