Important
Trending

ಹಿರಿಯ ಸ್ವಾತಂತ್ರ್ಯ ಯೋಧ ವೆಂಕಣ್ಣ ನಾಯಕ ವಿಧಿವಶ | ಕಳಚಿದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯದ ಕೊನೆಯ ಕೊಂಡಿ

ಗಣ್ಯರ ಸಂತಾಪ ನಾಳೆ ಬೆಳಿಗ್ಗೆ ಅಂತ್ಯ ಕ್ರಿಯೆ

ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ಪ ಗೃಹ ಸೂರ್ವೆಯಲ್ಲಿ ನಿಧನರಾದರು. ಕಳೆದ 2-3 ದಿನಗಳ ಹಿಂದಷ್ಟೇ ಮತ್ತೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ,ವೆಂಟಿಲೇಟರ್ ಚಿಕಿತ್ಸೆ ನೀಡಿ , ತದನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು.

ರಾತ್ರಿ ನಾಟಕದಲ್ಲಿ ಅದ್ಬುತವಾಗಿ ಅಭಿನಯಿಸಿ ಎಲ್ಲರ ಮನಗೆದ್ದಿದ್ದ ವ್ಯಕ್ತಿ ಬೆಳಿಗ್ಗೆ ಹೃದಯಘಾತದಿಂದ ಸಾವು

ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು,ಸಂಘ ಸಂಸ್ಥೆಗಳು, ಭಾರತೀಯ ತಟರಕ್ಷಕ ಪಡೆ ಸೇರಿದಂತೆ ಹಲವರು ಸೂರ್ವೆಯ ವೆಂಕಣ್ಣ ನಾಯಕ ಮನೆಗೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಿದ್ದರು.

ಜಿಲ್ಲಾಧಿಕಾರಿಗಳು ಸನ್ಮಾನಿಸುತ್ತಿದ್ದ ಚಿತ್ರ

ಸೋಮವಾರ ಬೆಳಿಗ್ಗೆ 8.30ಕ್ಕೆ ಅಂತ್ಯಕ್ರಿಯೆ

ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.
ವೆಂಕಣ್ಣ ನಾಯಕ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕಿ ರೂಪಾಲಿ ನಾಯ್ಕ, ಶಾಸಕ ಆರ್ ವಿ ದೇಶಪಾಂಡೆ, ಮಾಜಿ ಸಂಸದೆ ಮಾರ್ಗರೇಟ್ ಆಳ್ವ, ಮಾಜಿ ಶಾಸಕರಾದ ಸತೀಶ್ ಸೈಲ್, ಆನಂದ ಅಸ್ನೋಟಿಕರ ಸೇರಿದಂತೆ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ‘ವಿವಿಧ ಸ್ಥರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 8.30ಕ್ಕೆ ಸೂರ್ವೆಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button