ಅಗಸೂರು, ಅಂಬಾರಕೊಡ್ಲ, ಹಾರವಾಡ ಮತ್ತು ತಳಗದ್ದೆಯಲ್ಲೂ ಸೋಂಕಿನ ನಂಜು?
[sliders_pack id=”1487″]ಅಂಕೋಲಾ : ತಾಲೂಕಿನಲ್ಲಿ ಶನಿವಾರ 6 ಕೋವಿಡ್-19 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದ್ದು, ಜಿಲ್ಲೆಯಲ್ಲಿ ಒಂದೇ ದಿನ ಸೋಂಕು ಪ್ರಕರಣಗಳ ಸಂಖ್ಯೆ 80ರ ಗಡಿ ದಾಟಿದರು ಅಚ್ಚರಿ ಪಡಬೇಕಾಗಿಲ್ಲ ಎನ್ನಲಾಗುತ್ತಿದೆ. ಈ ಕುರಿತು ಆರೋಗ್ಯ ಇಲಾಖೆಯ ಹೆಲ್ತಬುಲೆಟಿನ್‍ನಲ್ಲಿ ಧೃಡಗೊಳ್ಳಬೇಕಿದೆ.(©Copyright reserved by Vismaya tv) ಈ ಹಿಂದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತನಾದ ಅಗಸೂರಿನ ವ್ಯಕ್ತಿಯೋರ್ವರ ಇಬ್ಬರು ಗಂಡುಮಕ್ಕಳಲ್ಲಿ, ಹಾರವಾಡದ 75 ವೃದ್ಧೆ ಮತ್ತು 7ರ ಬಾಲಕಿ, ಅಂಬರಕೊಡ್ಲದ 42ರ ಪುರುಷ ಮತ್ತು ತಳಗದ್ದೆಯ 16ರ ಯುವತಿಯಲ್ಲಿ ಸೋಂಕಿನ ಲಕ್ಷಣ ಧೃಡಪಟ್ಟಿದೆ ಎಂದು ಹೇಳಲಾಗುತ್ತಿದೆ.
ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು ಸಾರ್ವಜನಿಕರು ಹಲವು ಮುನ್ನೆಚರಿಕೆ ತೆಗೆದುಕೊಂಡು ತಾಲೂಕಾಡಳಿತ ಮತ್ತು ಆರೋಗ್ಯ ಇಲಾಖೆಯೊಂದಿಗೆ ಸೋಂಕು ನಿಯಂತ್ರಿಸಲು ಸಹಕರಿಸಬೇಕಿದೆ.
ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)