Follow Us On

WhatsApp Group
Focus NewsImportant
Trending

ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು: ಇನ್ನೊಬ್ಬ ನಾಪತ್ತೆ

ಈ ಹಿಂದೆ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಹಿನ್ನೆಲೆ ಆರೋಪಿಯನ್ನು ಬಂಧಿಸಲಾಗಿತ್ತು

ಶಿರಸಿ: ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಕೂಡಾ ಇಂತಹದೇ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಬಳಿಕ ಬೇಲ್ ಮೇಲೆ ಹೊರಗಡೆ ಬಂದಿದ್ದ. ಆದ್ರೆ, ಇದೀಗ ಮತ್ತೆ ತನ್ನ ಚಾಳಿ ಮುಂದುವರಿಸಿದ್ದಾನೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಆರು ಜನರಿಗೆ ಗಾಯ

ಹೌದು, ಈ ಹಿಂದೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯೋರ್ವ ಯಡಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿ ಆಕೆಯ ಮೈಮೇಲೆ ಕೈ ಹಾಕಿ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಷಯ ಮಡಿವಾಳ ಹೆರವಳ್ಳಿ ಎಂಬಾತನೇ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ

ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ತಡೆದು ಆಕೆಗೆ ಕಿರುಕುಳ ನೀಡಿ, ಆಕೆಯನ್ನು ಅಪಹರಣ ಮಾಡಲು ಉದ್ದೇಶಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಆರೋಪಿಯ ಮೇಲೆ ಪೋಕ್ಸೋ, ಅಪಹರಣಕ್ಕೆ ಪ್ರಯತ್ನ ಹಾಗೂ ದೈಹಿಕ ಹಿಂಸೆ ಸೇರಿದಂತೆ ಹಲವು ಕಲಂ ಅಡಿಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.

ನಂತರ ಜಾಮೀನಿನ ಮೇಲೆ ಹೊರಬಂದ ಆರೋಪಿ ಅಕ್ಷಯ ಇದೀಗ ಮತ್ತೆ ಆ ಬಾಲಕಿಯ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಅಪಹರಣ ಮಾಡುವ ಉದ್ದೇಶದಿಂದ ಪ್ರಯತ್ನಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

land for sale

Back to top button