ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ

ವಿದ್ಯುತ್ ಶಾಕ್ ತಗುಲಿ ಮಹಿಳೆ ಸ್ಥಳದಲ್ಲೇ ಸಾವು

ಮುoಡಗೋಡ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಬಳಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಕೊಲೆಯಂತೆ ಕಂಡುಬoದಿದ್ದು, ಗುರುತು ಸಿಗದಂತೆ ಮಾಡುವ ಉದ್ದೇಶದಿಂದ ಮುಖವನ್ನು ವಿರೂಪಗೊಳಿಸಿ ಶವವನ್ನು ಎಸೆಯಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೂನಿಯರ್ ನರೇಂದ್ರ ಮೋದಿ: ನೋಡೋಕೆ ಸೇಮ್ ಮೋದಿಯಂತೆ ಕಾಣ್ತಾರೆ ಇವರು!

ವಿದ್ಯುತ್ ಶಾಕ್ ತಗುಲಿ ಮಹಿಳೆ ಸ್ಥಳದಲ್ಲೇ ಸಾವು

ಶಿರಸಿ: ವಿದ್ಯುತ್ ಶಾಕ್ ತಗುಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ವಡ್ಡಿನಗದ್ದೆಯಲ್ಲಿ ನಡೆದಿದೆ. ಮೇಯಲು ಬಿಟ್ಟಿದ್ದ ದನಗಳನ್ನು ಹುಡುಕುತ್ತ ಬಂದ ವೇಳೆ ಮಹಿಳೆಗೆ ಐಬೆಕ್ಸ್ ಬೇಲಿ ತಾಗಿದ್ದು, ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ. 55 ವರ್ಷದ ಸರಸ್ವತಿ ಕೊಡಿಯಾ ಮೃತ ಮಹಿಳೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version