ಕಾರವಾರ: ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ 2.69 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿ ಬ್ಯಾಂಕ್ ಗೆ ಮೋಸಗೊಳಿಸಿದ ಘಟನೆ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ತೆಗೆದುಕೊಂಡು ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಈ ಗೋಲ್ಮಾಲ್ ಮಾಡಿದ್ದಾನೆ.
ಉಡವನ್ನು ನುಂಗಲು ಪ್ರಯತ್ನಿಸಿದ ಬೃಹತ್ ಗಾತ್ರದ ಕಾಳಿಂಗ ಸರ್ಪ: ಹೇಗಿತ್ತು ನೋಡಿ ಒಂದುವರೆ ಗಂಟೆಯ ಕಾದಾಟ!
ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತನ ವಿರುದ್ಧ ಇದೀಗ ಈ ಆರೋಪ ಕೇಳಿಬಂದಿದೆ. ಕಳೆದ ಏಪ್ರಿಲ್ 7 ರಿಂದ ಸೆಪ್ಟೆಂಬರ್ 9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.
ಆಂಧ್ರದಲ್ಲಿ ಎಸ್.ಬಿ.ಐ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ. ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ