ಮಕ್ಕಳ ಕಳ್ಳರು ಬಂದಿರುವುದು ನಿಜನಾ? ಅಸಲಿ ಸುದ್ದಿ ಏನು? ತುರ್ತು ಸಂದರ್ಭಗಳಲ್ಲಿ 112 ಕ್ಕೆ ಕರೆ ಮಾಡಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ

ಅಂಕೋಲಾ:ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶ ಮತ್ತು ರಾಜ್ಯಗಳ ಯಾವುದೋ ವಿಡಿಯೋ ತುಣುಕುಗಳನ್ನು ಬಿತ್ತರಿಸಲಾಗುತ್ತಿದೆ.

ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ KSRTC ಬಸ್: ಕೆಲಕಾಲ ಆತಂಕ

ಇದರಿಂದ ನಾಗರಿಕರ ನೆಮ್ಮದಿ ಕೆಡುವಂತಾಗಿದೆ.ಈ ರೀತಿಯ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠೆ ಡಾ.ಸುಮನ ಸೆನ್ನೇಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಯಿಂದ ಭಯಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ನಡೆಸುವ ಘಟನೆಗಳು ಕಂಡು ಬರುತ್ತಿವೆ. ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಅಪರಿಚಿತ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡಬೇಕು.

ಉತ್ತರಕನ್ನಡ ಪೊಲೀಸ್ ಪ್ರಕಟಣೆ

ಇದರಿಂದಾಗಿ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ.ಸಾರ್ವಜನಿಕರು ಆತಂಕಗೊಂಡು ಯಾವುದೇ ಅಪರಿಚಿತ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸುವುದಾಗಲಿ ಅಥವಾ ತೊಂದರೆ ಕೊಡುವುದಾಗಲಿ ಮಾಡಿದಲ್ಲಿ ಅಂಥವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠರು ಪ್ರಕಟಿಸಿದ್ದಾರೆ.

ಸಣ್ಣ ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಡುವವರ ವಿರುದ್ಧ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠೆ ಡಾ ಸುಮನ್ ಪೆನ್ನೇಕರ್ ಪ್ರಕಟನೆಯಲ್ಲಿ ಸೂಚನೆ ನೀಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version