Focus NewsImportant
Trending

100 ಅಡಿಗಿಂತ ಹೆಚ್ಚು ಆಳದ ಪ್ರಪಾತಕ್ಕೆ ಉರುಳಿದ ಲಾರಿ: ‌ಚಾಲಕ ಹಾಗೂ ನಿರ್ವಾಹಕ ಸ್ಥಳದಲ್ಲೇ‌ ಸಾವು

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪ್ರಪಾತಕ್ಕೆ ಬಿದ್ದ‌ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದ ಬಳಿನಡೆದಿದೆ. ಲಾರಿಯ ಚಾಲಕ ಹಾಗೂ ನಿರ್ವಾಹಕರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ.

ಸಾರಾಯಿ ಕುಡಿಯಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದೇ ತಪ್ಪಾ? ಆತ್ಮಹತ್ಯೆ ಮಾಡಿಕೊಂಡ ಮಗ

ಆಂಧ್ರಪ್ರದೇಶದಿಂದ ಮಂಗಳೂರಿನ ಕಡೆಗೆ ಗ್ರಾನೈಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ, ಅರಬೈಲ್ ಘಟ್ಟದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿ 100 ಅಡಿಗಿಂತ ಹೆಚ್ಚು ಆಳದ ಪ್ರಪಾತಕ್ಕೆ ಉರುಳಿದ್ದು ದುರ್ಘಟನೆ ಸಂಭವಿಸಿದೆ.

ಗುರುತು ಸಿಗದ ರೀತಿಯಲ್ಲಿ ಶವಪತ್ತೆಯಾಗಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿದ್ದ ಗ್ರಾನೈಟ್ ಕೂಡಾ ಸಂಪೂರ್ಣವಾಗಿ ಪುಡಿಪುಡಿಯಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

Back to top button