ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ: ಪರಾರಿಯಾದ ಓರ್ವ ಆರೋಪಿ

ಲಾಡ್ಜ್ ನಲ್ಲಿದ್ದ‌ ಮಹಿಳೆಯರ ರಕ್ಷಣೆ

ಮುರ್ಡೇಶ್ವರ:  ಇಲ್ಲಿನ ಶಿವಕೃಪ ಲಾಡ್ಜವೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಓರ್ವ ಪರಾರಿಯಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.

19,900 ರೂಪಾಯಿ ಆರಂಭಿಕ ವೇತನ: SSLC ಪಾಸಾಗಿದ್ದವರು ಅರ್ಜಿ ಸಲ್ಲಿಸಬಹುದು: ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ

ಬಂಧಿತ ಆರೋಪಿಗಳನ್ನು ನಾಗರಾಜ ಮೊಗೇರ ಮತ್ತು ಮಯೂರ ಎಂದು ತಿಳಿದು ಬಂದಿದೆ. ಪರಾರಿಯಾದ ಆರೋಪಿ ಶಿವಪ್ರಸಾದ್ ರಾವ್ ಎಂದು ತಿಳಿದು ಬಂದಿದೆ. ಇವರು ತಮ್ಮ ಲಾಭಗೊಸ್ಕರ ನೊಂದ ಮಹಿಳೆಯರನ್ನು ಕರೆಸಿ ಮುರುಡೇಶ್ವರ ಶಿವಕೃಪ ಲಾಡ್ಜನಲ್ಲಿ ಇರಿಸಿ ಗಿರಾಕಿಗಳಿಂದ ಬಂದ ಹಣವನ್ನು ಪಡೆದುಕೊಂಡು ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ನಲ್ಲಿದ್ದ ಮಹಿಳೆಯರ ರಕ್ಷಣೆ

ದಾಳಿ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರಲ್ಲಿ ಓರ್ವ ಮಹಿಳೆ ಹಾಸನ, ಇನ್ನೋರ್ವ ಮಹಿಳೆ ಬೆಂಗಳೂರು ಮೂಲದವರಾಗಿದ್ದಾರೆ. ಈ ಬಗ್ಗೆ ಮುರ್ಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಸ್ಮಯ ನ್ಯೂಸ್ ಭಟ್ಕಳ

Exit mobile version