ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಜಿಲ್ಲಾಧಿಕಾರಿಗಳಿಂದ ಕುಮಟಾದಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ

ಕುಮಟಾದ ಮೂರು ಕಡೆ ಅಧಿಕಾರಿಗಳ ತಂಡದೊಂದಿಗೆ ಭೇಟಿ

ಕುಮಟಾ: ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಕುಮಟಾ ತಾಲೂಕಿನ ಊರಕೇರಿ ಗ್ರಾಮಕ್ಕೆ ಆಗಮಿಸಿದ್ದ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾದ ಮುಲ್ಲಘ ಮುಗಿಲನ್ ಅವರು ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕುಮಟಾದಲ್ಲಿ ಗುರುತಿಸಲಾದ ಪ್ರದೇಶಗಳಿಗೆ ಅಧಿಕಾರಿಗಳ ತಂಡದೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

19,900 ರೂಪಾಯಿ ಆರಂಭಿಕ ವೇತನ: SSLC ಪಾಸಾಗಿದ್ದವರು ಅರ್ಜಿ ಸಲ್ಲಿಸಬಹುದು: ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ

ಕುಮಟಾ ತಾಲೂಕಿನ ಮಿರ್ಜಾನ ರೈಲ್ವೆ ನಿಲ್ಧಾಣ ಸಮೀಪದ ಪ್ರದೇಶ, ಅಂತ್ರವಳ್ಳಿಯ ಶಿಳ್ಳೆಯ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರದೇಶ, ಕುಮಟಾ ರೈಲ್ವೆ ನಿಲ್ಧಾಣಕ್ಕೆ ತೆರಳುವ ರಸ್ತೆಯ ಸಮೀಪದ ಪ್ರದೇಶ ಹಾಗೂ ಪಟ್ಟಣದ ಕೊಂಕಣ ಎಜ್ಯುಕೇಶನ್ ಸಂಸ್ಥೆಯ ಸಮೀಪದಲ್ಲಿರುವ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಸಹ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಡನೆ ತೆರಳಿ ಈ ಎಲ್ಲಾ ಪ್ರದೇಶಗಳ ಪರಿಶೀಲನೆ ನಡೆಸಿದ್ದರು. ಅಂತೆಯೇ ಇದೀಗ ಪುನಃ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅತ್ತ ಬೆಂಗಳೂರಿನಲ್ಲಿ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆದ ಬೆನ್ನಲ್ಲೆ, ಜಿಲ್ಲಾಧಿಕಾರಿಗಳು ದಿಢೀರ್ ಆಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಜಾಗ ಪರಿಶೀಲನೆ ಮಾಡಿದ್ದಾರೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ, ಕುಮಟಾ

Exit mobile version