Follow Us On

WhatsApp Group
Important
Trending

ಬೈಕ್ ಸವಾರನ ಮೇಲೆ ಹರಿದ ಜೆಲ್ಲಿ ತುಂಬಿದ ಲಾರಿ: ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಭಟ್ಕಳ: ಮಣ್ಕುಳಿಯ ಪುಷ್ಪಾಂಜಲಿ ಕ್ರಾಸ್ ಸಮೀಪ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ಬೈಕ್ ಸವಾರನ ಮೇಲೆ ಜೆಲ್ಲಿ ತುಂಬಿದ ಲಾರಿ ಹರಿದು ಹೋಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಮಂಜುನಾಥ ಗೊಂಡ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮರಂಬಳ್ಳಿ ನಿವಾಸಿ ಎಂದು ತಿಳಿದುಬಂದಿದೆ .

ಸಿಸಿಟಿವಿಯಲ್ಲಿ ದೃಶ್ಯ ಸೆರೆ

19,900 ರೂಪಾಯಿ ಆರಂಭಿಕ ವೇತನ: SSLC ಪಾಸಾಗಿದ್ದವರು ಅರ್ಜಿ ಸಲ್ಲಿಸಬಹುದು: ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ

ಈತ ಕೆಲಸಕ್ಕೆ ಹೋಗಲೆಂದು ಮಣ್ಕುಳಿಯ ಪುಷ್ಪಾಂಜಲಿ ಕ್ರಾಸ್ ಸಮೀಪ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ವೇಳೆ ಜೆಲ್ಲಿ ತುಂಬಿದ ಲಾರಿ ಮುಂಭಾಗದಲ್ಲಿ ಬರುತ್ತಿದ್ದ ಕಾರನ್ನು ಗುದ್ದಿ ರಸ್ತೆ ಕ್ರಾಸ್ ಮಾಡಲು ನಿಂತಿದ್ದ ಬೈಕ್ ಸವಾರನ ಮೇಲೆ ಹರಿದು ಹೋಗಿದೆ. ಅಪಘಾತ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಮಣ್ಕುಳಿಯ ಸ್ಥಳೀಯರು ಆತನನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ. ಸದ್ಯ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರಂಭದಲ್ಲಿ ಐಆರ್‌ಬಿ ವಾಹನ ಬೈಕ್ ಸವಾರನ ಮೇಲೆ ಹರಿದಿತ್ತು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಆದರೆ, ಕೊನೆಗೂ ಇದು ಐಆರ್‌ಬಿ ವಾಹನ ಅಲ್ಲ ಎಂಬುದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

land for sale

Back to top button