Important
Trending

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು: ಚಾಲಕ ಸ್ಥಳದಲ್ಲೇ ಸಾವು: ಮೂವರಿಗೆ ಗಾಯ

ಭಟ್ಕಳ: ತಾಲೂಕಿನ ಬೈಪಾಸ್ ಸಮೀಪ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಉನೈಜ್ ಹಮ್ಜದ ಖತೀಬ್ (20) ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಕಾರು ಚಲಾಸಿಕೊಂಡು ಬರುತ್ತಿರುವಾಗ ದುರ್ಘಟನೆ ಸಂಭವಿಸಿದೆ.

ಕಳೆದ 11 ವರ್ಷಗಳಿಂದ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ  ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಬಲ ಭಾಗಕ್ಕೆ ಹೋಗಿ ರಸ್ತೆಯ ಮಧ್ಯದಲ್ಲಿರುವ ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನ ಚಾಲಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

land for sale

Back to top button