ಭಟ್ಕಳ: ಭಟ್ಕಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು ಭಟ್ಕಳ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸೋಂಕು ಪತ್ತೆಯಾದ ಹಿನ್ನೆಯಲ್ಲಿ ತಾತ್ಕಾಲಿಕವಾಗಿ ತಹಶೀಲ್ದಾರ್ ಕಚೇರಿ ಸೀಲ್ ಡೌನ್ ಮಾಡಲಾಗಿದೆ
35 ವರ್ಷದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಚೇರಿಯನ್ನು ತಾತ್ಕಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ. ಸೋಮವಾರ ಕಚೇರಿಗೆ ಸೆನಿಟೈಸರ್ ಸಿಂಪಡಣೆ ಮಾಡಲಾಗಿದ್ದು ಕಛೇರಿ ಎಲ್ಲಾ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆಗೆ ಕಳಿಸಿದ್ದು, ಮಂಗಳವಾರ ತನಕ ಕ ಕಚೇರಿ ಸೀಲ್ ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ ಎನ್ ರವಿಚಂದ್ರನ್ ವಿಸ್ಮಯ ನ್ಯೂಸ್ ಗಸ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ