36 ಸಾವಿರ ಆರಂಭಿಕ ವೇತನ: SBI ನಲ್ಲಿ 1,673 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ

ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು

ಕಾರವಾರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳಿಗಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಸಲ್ಲಿಸಬಹುದು. ಒಟ್ಟು 1,673 ಹುದ್ದೆಗಳು ಖಾಲಿಯಿವೆ ಎಂದು ಮಾಹಿತಿ ನೀಡಲಾಗಿದೆ. ಯಾವುದೇ ಪದವಿ ಪಡೆದ ಕನಿಷ್ಠ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಹೊಟೇಲ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 12, ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ. ಮಾಸಿಕ ವೇತನ 36 ಸಾವಿರದಿಂದ 63 ಸಾವಿರ ಮಾಸಿಕ ವೇತನ ನಿಗದಿಯಾಗಿದೆ. SBI ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯಪರೀಕ್ಷೆ, ಸೈಕ್ರೊಮೆಟ್ರಿಕ್ ಪರೀಕ್ಷೆ ಹಾಗು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲೂಯಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಪ.ಜಾತಿ/ ಪ.ಪಂ./ಪಿಡಬ್ಲೂöಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾಮಾನ್ಯ ಒಬಿಸಿ ಅಭ್ಯರ್ಥಿಗಳು ರೂಪಾಯಿ 175 ಅರ್ಜಿ ಶುಲ್ಕ ಪಾವತಿಸಬೇಕಿದೆ. ಅರ್ಜಿಯನ್ನು ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಧಿಸೂಚನೆ ಕುರಿತ ಮಾಹಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version