ಅಂಕೋಲಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆ

ಅಂಕೋಲಾ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಮವಾರ ಒಂದೇ ದಿನಕ್ಕೆ 16 ಹೊಸ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು ಒಟ್ಟೂ ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾದಂತಿದೆ.

ಪಟ್ಟಣದ ಮುಲ್ಲಾವಾಡವೊಂದರಲ್ಲಿಯೇ 7ಪ್ರಕರಣಗಳು ಪತ್ತೆಯಾಗಿದ್ದು, ಅದೇ ಕುಟುಂಬದ ಈ ಹಿಂದಿನ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ತಗುಲಿರಬಹುದು. ಇವರ ಕುಟುಂಬದ ಟ್ರಾವೆಲ್ ಹಿಸ್ಟರಿಗೆ ಹೊನ್ನಾವರದ ನಂಟು ಕಂಡು ಬರುತ್ತಿದ್ದು, ಅಲ್ಲಿಯ ಸಮಾರಂಭವೊಂದಕ್ಕೆ ಕೆಲವರು ಹೋಗಿ ಬಂದಿದ್ದಾರೆ ಎನ್ನಲಾಗಿದ್ದು ಸೋಂಕಿನ ಮೂಲ ಪತ್ತೆ ಹಚ್ಚಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಕಲೆ ಹಾಕುತ್ತಿವೆ ಎನ್ನಲಾಗಿದೆ. ಪಟ್ಟಣದ ಕಂತ್ರಿಯ ವ್ಯಕ್ತಿಯೊರ್ವರಲ್ಲಿಯೂ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು ಅವರಿಗೂ ಮುಲ್ಲಾವಾಡದ ಸೋಂಕಿನ ಸಂಪರ್ಕದ ಮಾತು ಕೇಳಿ ಬರುತ್ತಿದೆ.ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುತ್ತಿರುವ ಇಬ್ಬರು ವ್ಯಾಪಾರಸ್ಥರು ಮತ್ತು ಮುಲ್ಲಾವಾಡ-ಹೊನ್ನಾವರದ ನಂಟಿನ ಕುರಿತು ಅಲ್ಲಲ್ಲಿ ಸಂಶಯದ ಮಾತುಗಳು ಕೇಳಿ ಬರುತ್ತಿದೆ. ಈ ಕುರಿತು ಪೋಲೀಸರು ಸಮಗ್ರ ತನಿಖೆ ನಡೆಸಿ ಜನರು ಆತಂಕಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಈ ಕುರಿತು ಮಾಹಿತಿ ಸಂಗ್ರಹ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಲಾಗುತ್ತಿದೆ.

[sliders_pack id=”1487″]

ಮೂಲೆಕೇಣಿಯ 6ಜನರಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಒಟ್ಟಾರೆಯಾಗಿ ಆ ಭಾಗದಲ್ಲಿ 14ಸೋಂಕಿನ ಪ್ರಕರಣಗಳು ದೃಢಪಟ್ಟಿದೆ ಎಂದು ಹೇಳಲಾಗಿದ್ದು ಇಂದಿನ ಸೋಂಕಿತರು ಸಹ ಈ ಹಿಂದಿನ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರು ಎಂದು ಎನ್ನಲಾಗುತ್ತಿದೆ.
ಮತ್ತೆರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೊಗಟಾದ ಓರ್ವ 40ರ ಪುರುಷ ಮತ್ತು ಕಣಗೀಲದ 33ರ ಮಹಿಳೆಯಲ್ಲಿ ಪಾಸಿಟಿವ್ ಕಂಡುಬಂದಿದ್ದು ಇವರು ಬೆಂಗಳೂರಿನಿಂದ ಮರಳಿದವರಾಗಿದ್ದಾರೆ ಎನ್ನಲಾಗಿದೆ.

ಸೋಮವಾರ ಹೊಸದಾಗಿ 39ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು ಈವರೆಗೆ ತಾಲೂಕಿನಿಂದ 1274 ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದಂತಾಗಿದೆ.

ಕುಮಟಾ ಉಪವಿಭಾಗಾಧಿಕಾರಿ ಅಜೀತ ಎಮ್ ಅವರು ತಾಲೂಕಿನ ವಿವಿಧ ಅಧಿಕಾರಿಗಳ ಸಭೆ ಕರೆದು, ಹೆಚ್ಚುತ್ತಿರುವ ಸೋಂಕಿನ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮ, 100 ಹಾಸಿಗೆಗಳ ನಿಗಾ ಕೇಂದ್ರ ಸ್ಥಾಪನೆಗೆ ಒತ್ತು ನೀಡುವುದು ಸೇರಿದಂತೆ ಹಲವು ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಹಾಗೂ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಉದಯ ಕುಂಬಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಅರ್ಚನಾ ನಾಯ್ಕ, ತಾಲೂಕಾಸ್ಪತ್ರೆಯ ಆಡಳಿತಾಧಿಕಾರಿ ಡಾ ಮಹೇಂದ್ರ ನಾಯ್ಕ, ಸಿ.ಪಿ.ಐ ಕೃಷ್ಣಾನಂದ ನಾಯ್ಕ, ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ, ಹಿಂ.ವ.ಇಲಾಖೆಯ ವಿಸ್ತರಣಾಧಿಕಾರಿ ಬಿಂದಿಯಾ ನಾಯಕ ಹಾಜರಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Exit mobile version