10ನೇ ತರಗತಿ ಪಾಸ್ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಕಾರವಾರ: 10ನೇ ತರಗತಿಯಲ್ಲಿ ಪಾಸ್ ಆಗಿ, ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಹೌದು, ಒಟ್ಟು 3,484 Police Constable ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ಮಂಡಳಿಯಿoದ 10ನೇ ತರಗತಿಯಲ್ಲಿ ಉತ್ತೀರ್ಣರಾದವರು ಅರ್ಜಿಯನ್ನು ಸಲ್ಲಿಸಬಹುದು. 23,500 ರಿಂದ 47,650 ರೂಪಾಯಿಗಳು ತಿಂಗಳ ಸಂಬಳ ಇರಲಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 31 ಕೊನೆಯ ದಿನ ಆಗಿರಲಿದೆ.

36 ಸಾವಿರ ಆರಂಭಿಕ ವೇತನ: SBI ನಲ್ಲಿ 1,673 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲ್ಲಿ ಅರ್ಜಿಸಲ್ಲಿಸಬೇಕಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ವೆಬ್‌ಸೈಟ್ ksp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

ಪೊಲೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿoದ ಎಸ್‌ಎಸ್‌ಎಲ್‌ಸಿ/10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಿರುವುದು ಕಡ್ಡಾಯವಾಗಿದೆ. ಅಲ್ಲದೆ ವಯಸ್ಸು 18ಕ್ಕಿಂತ ಕಡಿಮೆಯಿರಬಾರದು ಹಾಗು 25 ವರ್ಷಕ್ಕಿಂತ ಹೆಚ್ಚಿರಬಾರದು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31 2022 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.. ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಮತ್ತು ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಅಧಿಸೂಚನೆಯನ್ನು ನೋಡಬಹುದು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version