Focus News
Trending

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಮಟಾ: ದಿನಾಂಕ 26ಮತ್ತು 27 ಸಪ್ಟೆಂಬರ್ 2022 ರಂದು ಹೊನ್ನಾವರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಉತ್ತರ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕೊಂಕಣ ಎಜುಕೇಷನ್ ಟ್ರಸ್ಟ್ ಕುಮಟಾದ ಬಿ.ಕೆ. ಭಂಡಾರಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿ ಪಾಸ್ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಸಂಸ್ಥೆ ಹಾಗೂ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುವ ವಿಜ್ಞಾನ ವಿಭಾಗದ ಕು.ಆಕಾಂಕ್ಷಾ ಬಿ. ಎಮ್., ಕು.ಅಭಿರಾಮ ಎ. ಎನ್. ಮತ್ತು ವಾಣಿಜ್ಯ ವಿಭಾಗದ ಕು. ಚೇತನ ಭಂಡಾರಿ, ಈ ಮೂವರು ವಿದ್ಯಾರ್ಥಿಗಳು ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ, ಹಾಗೂ ಕು.ಚಾರ್ವಿ ವಾಳ್ಕೆ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ವಿಶ್ವಸ್ಥರು ಹಾಗೂ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಶ್ರೀ. ಗುರುರಾಜ ಶೆಟ್ಟಿ, ಪ್ರಾಂಶುಪಾಲರಾದ ಶ್ರೀ. ಕಿರಣ ಭಟ್ಟ, ಉಪ ಪ್ರಾಂಶುಪಾಲರಾದ ಶ್ರೀಮತಿ. ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕರಾದ ಶ್ರೀ. ದೀಪಕ್ ನಾಯ್ಕ, ದೈಹಿಕ ನಿರ್ದೇಶಕರಾದ ನಾಗರಾಜ ಭಂಡಾರಿ ಹಾಗೂ ಎಲ್ಲಾಬೋಧಕ ಮತ್ತು ಬೋಧಕೆತರ ಸಿಬ್ಬಂದಿಯವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button