KSRTC ವೋಲ್ವೊ ಬಸ್ ಮತ್ತು ಟೆಂಪೋ ನಡುವೆ ಅಪಘಾತ: 20 ಪ್ರಯಾಣಿಕರಿಗೆ ಗಾಯ

ಭಟ್ಕಳ: ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತೆರ್ನಮಕ್ಕಿ ಚರ್ಚೆ ಸಮೀಪ ನಡೆದಿದೆ.  ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡಿಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ.

ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಕಳ್ಳತನ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿ ಪರಾರಿ

ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಗಳು ದಾಖಲು ಮಾಡಲಾಗಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ ಎಡಬಾಗಕ್ಕೆ  ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ. 

ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ವಿಷಯ ತಿಳಿದು ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಹಾಗೂ ಭಟ್ಕಳ ಸರ್ಕಾರಿ ಆಸ್ಪತ್ರೆಗೆ  ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಶ್ರೀ ಗೋವಿಂದ ನಾಯ್ಕ ಭೇಟಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಅಪಘಾತದಲ್ಲಿ 20 ಕ್ಕೂ ಅಧಿಕ ಮಂದಿ  ಗಾಯಗೊಂಡಿದ್ದು,, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version