ImportantJob News
Trending

ಭಾರತೀಯ ಜೀವ ವಿಮಾ ನಿಗಮದಲ್ಲಿ ಉದ್ಯೋಗ: ಹಲವು ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಜೀವ ವಿಮಾ ನಿಗಮದಲ್ಲಿ (LIC) ಉತ್ತಮ ಅವಕಾಶ ಒದಗಿ ಬಂದಿದೆ. ಎಲ್​ಸಿಯ ಮುಖ್ಯ ತಾಂತ್ರಿಕ ಅಧಿಕಾರಿ , ಮುಖ್ಯ ಡಿಜಿಟಲ್ ಅಧಿಕಾರಿ ಹಾಗು ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ ಗೆ licindia.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಮೂರು ಹುದ್ದೆಗಳಿಗೆ ಬೇರೆ ಬೇರೆ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ.

2,200 ಕೆ.ಜಿ ದನದ ಮಾಂಸ ವಶಕ್ಕೆ| ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣ

LIC Recruitment 2022 : ಅರ್ಹತಾ ಮಾನದಂಡಗಳು ಏನು?

ಮುಖ್ಯ ತಾಂತ್ರಿಕ ಅಧಿಕಾರಿಯ ಹುದ್ದೆಗೆ ಇಂಜಿನಿಯರಿoಗ್ ಪದವೀಧರ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆಯಿoದ ಸಮಾನ ಅರ್ಹತೆ ಮತ್ತು 15 ವರ್ಷಗಳ ಅನುಭವ ಹೊಂದಿರಬೇಕು. ಮುಖ್ಯ ಡಿಜಿಟಲ್ ಅಧಿಕಾರಿಯ ಹುದ್ದೆಗೆ ವ್ಯವಹಾರ, ತಂತ್ರಜ್ಞಾನ, ಕಂಪ್ಯೂಟರ್ ಸೈನ್ಸ್ ಅಥವಾ ಡಿಜಿಟಲ್ ಮಾರ್ಕೆಟಿಂಗ್ ಅಥವಾ ಸಂಬoಧಿತ ಕ್ಷೇತ್ರಗಳಲ್ಲಿ ಪದವಿಸ್ನಾತಕೋತ್ತರ ಪದವಿ ಮತ್ತು 15 ವರ್ಷಗಳ ಅನುಭವ ಹೊಂದಿರಬೇಕಿದೆ. ಮುಖ್ಯ ಮಾಹಿತಿ ಭದ್ರತಾ ಅಧಿಕಾರಿಹುದ್ದೆಗೆ ಮಾಹಿತಿ ಭದ್ರತೆಯಲ್ಲಿ ಪ್ರಮಾಣಪತ್ರ ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಇಂಜಿನಿಯರ್ ಪದವಿಯೊಂದಿಗೆ ಸಂಬoಧಪಟ್ಟ ಕ್ಷೇತ್ರದಲ್ಲಿ 15 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.

LIC Recruitment 2022: ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ https://licindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ. ಅಲ್ಲದೆ, ಅಧಿಕೃತ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button