Big NewsImportant
Trending

ಪರೇಶ್ ಮೇಸ್ತಾದು ಹತ್ಯೆಯಲ್ಲ, ಆಕಸ್ಮಿಕ ಸಾವು: ವರದಿ ಸಲ್ಲಿಸಿದ ಸಿಬಿಐ

ಸಿಬಿಐ ವರದಿಯಲ್ಲಿ ಏನಿದೆ ನೋಡಿ?

ಕಾರವಾರ : ಹೊನ್ನಾವರ ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಂಬಂಧ ಸಿಬಿಐ ನಿಂದ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಯಾಗಿದೆ. ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಆಕಸ್ಮಿಕವಾಗಿ ಸಾವು ಎಂದು ಸಿಬಿಐ ವರದಿ ಸಲ್ಲಿಸಿದೆ.ಹೌದು, ಐದು ವರ್ಷಗಳ ಹಿಂದೆ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಪರೇಶ್ ಮೇಸ್ತಾ ಮೃತಪಟ್ಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ಇದೀಗ ‘ಬಿ’ ರಿಪೋರ್ಟ್ ಸಲ್ಲಿಸಿದೆ.

Indian Railway Recruitment 2022: 3,115 ಹುದ್ದೆಗಳಿಗೆ ಅರ್ಜಿ ಆಹ್ವಾನ: SSLC ಪಾಸಾದವರು ಅರ್ಜಿ ಸಲ್ಲಿಸಬಹುದು

ಇಂದು ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು, ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16 ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ.2017 ರ ಡಿಸೆಂಬರ್ 6 ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ.ಡಿಸೆಂಬರ್ ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಪರೇಶ್ ಮೇಸ್ತಾ.

ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು. ಇದು ಗಲಭೆಗೂ ಕಾರಣವಾಗಿತ್ತು.

ನಾಲ್ಕುವರೆ ವರ್ಷದ ಬಳಿಕ ಸಿಬಿಐನಿಂದ ವರದಿ

ಅಂದಿನ ಕಾಂಗ್ರೆಸ್ ಸರ್ಕಾರಕ್ಕೂ ಈ ಪ್ರಕರಣ
ಬಿಸಿತುಪ್ಪವಾಗಿ ತಂದಿತ್ತು. ಬಳಿಕ ನಡೆದ ಬೆಳವಣಿಗೆಯಲ್ಲಿ ಸಿಬಿಐ ತನಿಖೆಗೆ ಈ ಪ್ರಕರಣವನ್ನ ವಹಿಸಲಾಗಿತ್ತು. ಸದ್ಯ ಇದೇ ಪ್ರಕರಣ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಜೀವ ಪಡೆದುಕೊಂಡಂತೆ ಕಾಣುತ್ತಿದೆ.ಐದು ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು..ನಾಲ್ಕೂವರೆ ವರ್ಷದ ನಂತರ ಸಿಬಿಐ ನಿಂದ ವರದಿ ಸಲ್ಲಿಕೆಯಾಹಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ

land for sale

Back to top button