Focus NewsImportant
Trending

ರಸ್ತೆ ಮಧ್ಯೆ ಸಿನಿಮೀಯ ರೀತಿಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎರಡು ಕೋಟಿಗೂ ಅಧಿಕ ಹಣ ಕಸಿದು ಪರಾರಿ

ತಡರಾತ್ರಿ ಕಾರಿನಲ್ಲಿ ಬರುತ್ತಿದ್ದಾಗ ಘಟನೆ

ಯಲ್ಲಾಪುರ: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಎರಡು ಕೋಟಿಗೂ ಅಧಿಕ ಹಣ ದರೋಡೆ ಮಾಡಿದ ಘಟನೆ ಇಲ್ಲಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಕಾರಿನಲ್ಲಿ ತಡರಾತ್ರಿ ಬರುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ, ಚಿನ್ನಾಭರಣ ದೋಚಿದ್ದು, ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Indian Railway Recruitment 2022: 3,115 ಹುದ್ದೆಗಳಿಗೆ ಅರ್ಜಿ ಆಹ್ವಾನ: SSLC ಪಾಸಾದವರು ಅರ್ಜಿ ಸಲ್ಲಿಸಬಹುದು

ಇತ್ತಿಚೆಗೆ ತಡರಾತ್ರಿ ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅರಬೈಲ್ ಘಟ್ಟದಲ್ಲಿ ಎರಡು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಕಾರಿನಲ್ಲಿದ್ದವರನ್ನು ಹೆದರಿಸಿ, ಚಿನ್ನಾಭರಣ ಖರೀದಿಗಾಗಿ ತೆಗೆದುಕೊಂಡು ಹೋಗುತ್ತಿದ್ದ 2 ಕೋಟಿ 11 ಲಕ್ಷವನ್ನು ಕಸಿದು ಪರಾರಿಯಾಗಿದ್ದಾರೆ. ಅಲ್ಲದೆ, ಮೊಬೈಲ್ ಅನ್ನೂ ದೋಚಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಚಿನ್ನ ಖರೀದಿಗೆ ಕೇರಳಕ್ಕೆ ಹೊರಟವರ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯ ಮಾಡಿದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ದರೋಡೆ ಪ್ರಕರಣ ಇದೀಗ ಈ ಭಾಗದಲ್ಲಿ ಓಡಾಡುವವರ ಆತಂಕಕ್ಕೆ ಕಾರಣವಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Related Articles

Back to top button