Follow Us On

Google News
Focus NewsImportant
Trending

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆ: ಸ್ಥಳ ಪರಿಶೀಲನೆಗೆ ಆಗಮಿಸಲಿದ್ದಾರೆ ಆರೋಗ್ಯ ಸಚಿವರು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆಯನ್ನು ಸರ್ಕಾರ ನೀಡಿದ ಬೆನ್ನಲ್ಲೆ ಇದೀಗ, ಜಿಲ್ಲೆ ಆರೋಗ್ಯ ಸಚಿವರು ಆಗಮಿಸಲಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅಕ್ಟೋಬರ್ 11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ. ಯಾವ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬುದರ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದು. ಈ ವೇಳೆ ಜಾಗ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆಯಿದೆ. ಈ ಕುರಿತು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್ ನಾಯ್ಕ ಅವರು ಮಾಹಿತಿ ನೀಡಿದ್ದಾರೆ.

ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿ ಹಣ ದರೋಡೆ: ಆರೇ ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಇದೇ ವೇಳೆ, ಕಾರವಾರದ ಮೆಡಿಕಲ್ ಕಾಲೇಜಿಗೆ ಆಗಮಿಸಿ 160 ಕೋಟಿ ರೂಪಾಯಿ ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವಿಧಾನಸಭಾ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು , ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಆಗ್ರಹಿಸಿ, ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಸೆಳೆದಿದ್ದರು. ಈ ವೇಳೆ ಸಿಎಂ ಮತ್ತು ಆರೋಗ್ಯ ಸಚಿವರು, ಆಸ್ಪತ್ರೆಗೆ ನಿರ್ಮಿಸುವ ಭರವಸೆ ನೀಡಿ, ಸ್ಥಳ ಪರಿಶೀಲನೆಗೆ ಆಗಮಿಸುವುದಾಗಿ ತಿಳಿಸಿದ್ದರು.

ವಿಸ್ಮಯ ನ್ಯೂಸ್, ಕಾರವಾರ

ಹಿತೇಂದ್ರ ನಾಯ್ಕ ಸಿದ್ದಾಪುರ

Back to top button
Idagunji Mahaganapati Chandavar Hanuman