Focus News
Trending

ಎಸ್. ಕೆ. ಪಿ ಹೈಸ್ಕೂಲ್ ಕತಗಾಲ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಮಟಾ: ಹೊನ್ನಾವರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಎಸ್.ಕೆ.ಪಿ ಕತಗಾಲ ವಿದ್ಯಾರ್ಥಿಗಳು ರಾಜ್ಯ ಮತ್ತು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ದಿವ್ಯಾ ಚಂದ್ರಶೇಖರ ನಾಯ್ಕ ಪೋಲ್‌ವಾಲ್ಟನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಬಾಲಕರ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಎಸ್.ಡಿ.ಎಮ್.ಸಿಯವರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯಾಧ್ಯಾಪಕರು, ಸಿಬ್ಬಂದಿವರ್ಗ, ಪೂರ್ವವಿದ್ಯಾರ್ಥಿಗಳು, ಊರನಾಗರಿಕರು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Related Articles

Back to top button