ಅಂಕೋಲಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸಚಿವ ಡಾ.ಕೆ. ಸುಧಾಕರ ಅವರು ಅಕ್ಟೋಬರ್ 11 ರಂದು ಉತ್ತರ ಜಿಲ್ಲೆಗೆ ಭೇಟಿ ನೀಡಲಿದ್ದು ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ಭೇಟಿ ಅತ್ಯಂತ ಮಹತ್ವಪೂರ್ಣ ಎನಿಸಿದೆ.
ಕುದಿಯುತ್ತಿರುವ ಬಿಸಿ ಎಣ್ಣೆಯಲ್ಲಿ ಕೈಹಾಕಿ ವಡೆ ಸೇವೆ: ಈ ಭಾಗದಲ್ಲಿದೆ ವಿಶಿಷ್ಠ ಆಚರಣೆ
ಬೆಳಿಗ್ಗೆ 6.35 ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಗೋವಾಕ್ಕೆ ಹೊರಡಲಿರುವ ಡಾ. ಸುಧಾಕರ 7.40 ಕ್ಕೆ ಗೋವಾ ವಿಮಾನ ನಿಲ್ದಾಣ ತಲುಪಲಿದ್ದು 7.50 ಕ್ಕೆ ಗೋವಾದಿಂದ ರಸ್ತೆ ಮಾರ್ಗವಾಗಿ ಹೊರಟು 10 ಗಂಟೆಗೆ ಕಾರವಾರ ತಲುಪಲಿದ್ದಾರೆ.
ಬೆಳಿಗ್ಗೆ 11 ಗಂಟೆಯಿಂದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿರುವ ಸಚಿವರು ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲನೆ ನಡೆಸಲಿದ್ದು 11.45 ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಸ್ಪತ್ರೆಗೆ ಸ್ಥಳ ಪರಿಶೀಲನೆ
ಮದ್ಯಾಹ್ನ ಕುಮಟಾಕ್ಕೆ ಭೇಟಿ ನೀಡಲಿರುವ ಸಚಿವರು ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಗುರುತಿಸಲು ಮಿರ್ಜಾನ, ಎತ್ತಿನಬೈಲ್, ಕುಮಟಾ ಸುತ್ತ ಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮದ್ಯಾಹ್ನ 3 ಗಂಟೆಗೆ ಕುಮಟ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಭಟ್ಕಳಕ್ಕೆ ತೆರಳಿರುವ ಸಚಿವರು 4.15 ಕ್ಕೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿಂದ ಮಂಗಳೂರು ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಆರೋಗ್ಯ ಸಚಿವರ ಜಿಲ್ಲಾ ಪ್ರವಾಸದಿಂದ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ಕಂಡು ಬಹುಜನತೆಯ ಆಶೋತ್ತರಗಳಿಗೆ ಸರ್ಕಾರ ಸ್ಪಂದಿಸಬೇಕಾಗಿದೆ ಎಂಬ ಮಾತು ಹಲವೆಡೆಯಿಂದ ಕೇಳಿ ಬರುತ್ತಿದೆ..
ವಿಸ್ಮಯ ನ್ಯೂಸ್ ವಿಲಾಪ ನಾಯಕ ಅಂಕೋಲಾ