Focus News
Trending

ಜಿಲ್ಲಾಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಗೆಲುವು: ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆ

ಕುಮಟಾ: ನಿರ್ಮಲಾ ಕಾನ್ವೆಂಟ್ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾದ ಸಿಂಚನ ಜಿ. ಭಟ್,,, ಇತ್ತೀಚೆಗೆ ಭಟ್ಕಳದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕನ್ನು ಪ್ರತಿನಿಧಿಸಿ ಐದರಲ್ಲಿ ನಾಲ್ಕು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾಳೆ. ಇವಳನ್ನು ನಿರ್ಮಲಾ ಕಾನ್ವೆಂಟ್ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕರು ಅಭಿನಂದಿಸಿರುತ್ತಾರೆ. ಇವಳು ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ರಾಷ್ಟಿçÃಯ ತೀರ್ಪುಗಾರರಾದ ಪ್ರೊ. ಜಿ. ಡಿ. ಭಟ್ ಇವರ ಪುತ್ರಿಯಾಗಿದ್ದು, ಈಕೆಯ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button